ಎಲ್ಲಿ ಮನಕಳುಕಿರದೋ ಎಲ್ಲಿ ತಲೆ ಬಾಗಿರದೋ
ಎಲ್ಲಿ ತಿಳಿವಿಗೆ ತೊಡಕು ತೋರದಿಹುದಲ್ಲಿ
ಎಲ್ಲಿ ಮನೆಯೊಕ್ಕಟ್ಟು ಸಂಸಾರ ನೆಲೆಗಟ್ಟು
ಧೂಳೊಡೆಯದಿಹುದೊ ತಾನಾನಾಡಿನಲ್ಲಿ
ಎಲ್ಲಿ ಸತ್ಯದಗಾಧ ನೆಲೆಯಿಂದ ಸವಿಮಾತು
ಸಲ್ಲಲಿತ ನಡೆಯಿಂದ ಮುಂಬರಿವುದಲ್ಲಿ
ಎಲ್ಲಿ ದಣಿವಿರದ ಸಾಧನೆಯು ಸಫಲತೆಯ ಕಡೆಗೆ
ತೋಳ ನೀಡಿಹುದೊ ತಾನಾನಾಡಿನಲ್ಲಿ
ಎಲ್ಲಿ ಸುವಿಚಾರ ನಿರ್ಮಲ ಜಲದೊಸರು ಹರಿದು
ಕಾಳು ರೂಢಿಯ ಮರಳೊಳಿಂಗಿ ಕೆಡದಲ್ಲಿ
ಎಲ್ಲಿ ನೀನೆಮ್ಮ ಚಿಂತನವನನುದ್ಯಮವ ಸುವಿ
ಶಾಲತೆಯ ಪೂರ್ಣತೆಗೆ ಮುನ್ನಡೆಸುವಲ್ಲಿ
ಅಲ್ಲಿಯಾ ಬಂಧನರಹಿತ ಸುಖದ ಸ್ವರ್ಗದಲ್ಲಿ
ಪಾಲಿಸೈ ಪಿತ ನಮ್ಮ ನಾಡೆಚ್ಚರಿರಲಿ.
- ರಬೀಂದ್ರನಾಥ ಠಾಗೋರರ "Where the mind is without fear..." ಅನುವಾದ ಎಮ್. ಎನ್. ಕಾಮತ್ ಅವರಿಂದ. ಕೆನರಾ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಗ ೧೦ ವರ್ಷವೂ ನಿತ್ಯವೂ ಹಾಡಿದ ಗೀತೆಯಿದು. ಇಂದಿಗೂ ಆಗಾಗ ಹಾಡುತ್ತಲೇ ಇರುವ ಅತ್ಯಂತ ಪ್ರಿಯ ಹಾಡು.
No comments:
Post a Comment