ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

08 September, 2014

ಶ್ರೀಮದ್ಭಗವದ್ಗೀತಾ- ಅಧ್ಯಾಯ ಮೂರು!

ಕರ್ಮೇಂದ್ರಿಯಾಣಿ ಸಂಯಮ್ಯ ಯ ಅಸ್ತೇ ಮನಸಾ ಚರನ್|
ಇಂದ್ರಿಯಾರ್ಥಾನ್ ವಿಮೂಢಾತ್ಮಾ ಮಿಥ್ಯಾಚಾರಃ ಸ ಉಚ್ಯತೇ||

ಕರ್ಮೇಂದ್ರಿಯಗಳನ್ನು ಅದುಮಿಟ್ಟು, ಮನಸ್ಸಿನಿಂದಲೇ ಇಂದ್ರಿಯ ವಿಷಯಗಳ ಕನಸು ಕಾಣುವ ತಿಳಿಗೇಡಿ ಡಂಭಾಚಾರಿ ಎನಿಸುತ್ತಾನೆ.

ಇಂದಿನ ಪ್ರಪಂಚದಲ್ಲಿ ಹೊರಗಿನ ವೇಷಕ್ಕೆ ಹೆಚ್ಚು ಪ್ರಾಧಾನ್ಯತೆ ಕೊಡುತ್ತಿರುವುದನ್ನು ನಾವು ಕಾಣುತ್ತೇವೆ. ಮನಸ್ಸಿನಲ್ಲಿ ಎಲ್ಲಾ ಆಸೆ ಇಟ್ಟುಕೊಂಡು, ಯಾವುದೇ ಭಯದಿಂದ ಹೊರನೋಟಕ್ಕೆ ಸದಾಚಾರಸಂಪನ್ನರಂತೆ ಬದುಕುವವರಿದ್ದಾರೆ. ಕೃಷ್ಣ ಅದನ್ನು ಕಪಟ ಧಾರ್ಮಿಕತೆ ಎನ್ನುತ್ತಾನೆ. ನಾವು ಮೊದಲು ನಮ್ಮ ಆತ್ಮಸಾಕ್ಷಿಗೆ ವಂಚನೆ ಮಾಡದೇ ಬದುಕಬೇಕು. ಹೊರಗಿನ ಆಚಾರಕ್ಕಿಂತ ಮೊದಲು ಒಳಗಿನ ಆಚಾರಶುದ್ಧಿ ಮುಖ್ಯ. ಇದಿಲ್ಲದಿದ್ದರೆ ಎಂದೂ ಉದ್ಧಾರವಿಲ್ಲ. ಕರ್ಮೇಂದ್ರಿಯಗಳನ್ನು ಅದುಮಿಟ್ಟು, ಮನಸ್ಸಿನಿಂದಲೇ ಇಂದ್ರಿಯ ವಿಷಯಗಳ ಕನಸು ಕಾಣುವ ತಿಳಿಗೇಡಿ ಡಂಭಾಚಾರಿ ಎನಿಸುತ್ತಾನೆ ಕೃಷ್ಣ.

-ಶ್ರೀಮದ್ಭಗವದ್ಗೀತಾ ಅಧ್ಯಾಯ-3

ವಿವರಣೆ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ

No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...