ಮನುಷ್ಯನ
ದುಃಖಕ್ಕೆ ಮೂಲ ಕಾರಣ ಆತನ ಕ್ಷುದ್ರ ಬಯಕೆಗಳು. ತನ್ನ ಬಯಕೆ ಈಡೇರದೇ ಇದ್ದಾಗ ದುಃಖ ಕೋಪ ಇತ್ಯಾದಿ ಆರಂಭವಾಗುತ್ತದೆ. ಇದರಿಂದ ಆತ
ತನ್ನ ಜೀವನವನ್ನು, ಬಂಧು ಮಿತ್ರರ ಜೀವನವನ್ನೂ ನರಕವನ್ನಾಗಿ ಮಾಡುತ್ತಾನೆ. ಇಂತಹ ಸ್ಥಿತಿಯಲ್ಲಿ
ಆತನಿಗೆ ತನ್ನೊಳಗಿರುವ ಅಪೂರ್ವ ಶಕ್ತಿಯ ಬಗ್ಗೆ ಅರಿವಿರುವುದಿಲ್ಲ.
ಸ್ಥಿತಪ್ರಜ್ಞನಾದವನು ಈ ಜಂಜಾಟದಲ್ಲಿ ಸಿಲುಕದೇ,
ತನ್ನಂತರಂಗದಲ್ಲಿನ ಆ ಮಹದಾನಂದವನ್ನು ಸದಾ ಸವಿಯುತ್ತಾ ಸಂತೋಷವಾಗಿರುತ್ತಾನೆ. ಆತ ಕಾಮನೆಗಳಿಗೆ
ಬೆಂಬೀಳುವುದಿಲ್ಲ. ಬೇಕು ಎನ್ನುವ ಬಯಕೆ ಆತನನ್ನು ಕಾಡುವುದಿಲ್ಲ. ಆತನ ಮನಸ್ಸು ಸದಾ
ಪ್ರಸನ್ನವಾಗಿರುತ್ತದೆ. ಜೀವನದಲ್ಲಿ ಎಂತಹ ಸಮಸ್ಯೆ ಬಂದರೂ ಆತ ಉದ್ವೇಗಕ್ಕೆ ಒಳಗಾಗುವುದಿಲ್ಲ.
ಆತನ ಮನಸ್ಸು ಗಟ್ಟಿಯಾಗಿರುತ್ತದೆ ಮತ್ತು ಇದರಿಂದ ಆತ ಯಶಸ್ಸನ್ನು ಕಾಣಬಲ್ಲ.
-ವಿದ್ಯಾ ವಾಚಸ್ಪತಿ ಬನ್ನಂಜೆ
ಗೋವಿಂದಾಚಾರ್ಯ
No comments:
Post a Comment